ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿಗೆ ಪುರಸ್ಕೃತರಾಗಿರುವ ನಗರದ ಜ್ಞಾನಗಂಗಾ ಪ್ರೌಢಶಾಲೆಯ ಸಹ ಶಿಕ್ಷಕ ಕೋದಂಡರಾಮ ಅವರನ್ನು ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಅಭಿನಂದಿಸಲಾಯಿತು.
ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪಿ.ಗೋವಿಂದರಾಜು ಮಾತನಾಡಿ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸುವ ಕೋದಂಡರಾಮ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಉತ್ತಮ ಸಹಕಾರ ನೀಡುತ್ತಿದ್ದು. ಸಮಾಜ ವಿಜ್ಞಾನ ವಿಷಯದ ಸಂಪನ್ಮೂಲ ವ್ಯಕ್ತಿಯಾಗಿ ದೆಹಲಿ, ಮೈಸೂರು ಮುಂತಾದ ಕಡೆಯಲ್ಲಿ ನಡೆದ ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಿ ಜಿಲ್ಲೆಯ ಹೆಮ್ಮೆ ಹೆಚ್ಚಿಸಿದ್ದಾರೆ.

ಯುವ ಸಂಸತ್, ರಸಪ್ರಶ್ನೆ, ರಾಷ್ಟೀಯ ಮತದಾರ ದಿನಾಚರಣೆ ಮುಂತಾದ ಕಾರ್ಯಕ್ರಮಗಳನ್ನು ಸಂಘಟಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ಇವರ ಸೇವೆ ಮತ್ತು ಸಾಧನೆಯನ್ನು ಗುರುತಿಸಿ ಹಲವಾರು ಸಂಘ ಸಂಸ್ಥೆಗಳು ವಿವೇಕರತ್ನ ಮುಂತಾದ ಪ್ರಶಸ್ತಿಗಳನ್ನು ನೀಡಿ ಅಭಿನಂದಿವೆ. ಇವರ ಸೇವೆ ಮತ್ತು ಸಾಧನೆ ಹೀಗೆ ಮುಂದುವರಿಲಿ ಎಂದು ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಆಶಿಸುತ್ತದೆ ಎಂದರು.
ಈ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು, ಸದಸ್ಯರು ಹಾಜರಿದ್ದರು.
