ಮುಸಾಶಿ ಕಾರ್ಖಾನೆಯಲ್ಲಿ ರಾಸಾಯನಿಕ ಸೋರಿಕೆ ಅಣುಕು ಪ್ರದರ್ಶನ

Spread the love

ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಮತ್ತು ಎನ್.ಡಿ.ಆರ್.ಎಫ್ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಓಬದೇವನಹಳ್ಳಿ 3ನೇ ಹಂತದ ಕೈಗಾರಿಕಾ ಪ್ರದೇಶದಲ್ಲಿರುವ ಮುಸಾಶಿ ಆಟೋ ಪಾರ್ಟ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಇಲ್ಲಿ ಇಂದು ಅಫ್ ಸೈಟ್ ತುರ್ತು ರಾಸಾಯಿನಿಕ ಸೋರಿಕೆ ಅಣುಕು ಪ್ರದರ್ಶನವನ್ನು ಯಶಸ್ವಿಯಾಗಿ ನಡೆಸಲಾಯಿತು.

ಆಫ್-ಸೈಟ್ ತುರ್ತು ಅಣಕು ಪ್ರದರ್ಶನದಲ್ಲಿ ಸುಮಾರು 20 ಕ್ಕೂ ಅಧಿಕ ಪೊಲೀಸ್ ಸಿಬ್ಬಂದಿಗಳು, ಎನ್.ಡಿ.ಆರ್.ಎಫ್ ಸಿಬ್ಬಂದಿ, ಅಗ್ನಿಶಾಮಕ ದಳ, 02 ಆಂಬ್ಯುಲೆನ್ಸ್, 07 ಬಸ್ ಗಳು, ವೈದ್ಯರು, ದಾದಿಯರು, ವೀಕ್ಷಕರು ಮತ್ತು ವಿವಿಧ ಕಾರ್ಖಾನೆಗಳಿಂದ ಸುಮಾರು 100 ಪ್ರತಿನಿಧಿಗಳು ಭಾಗವಹಿಸಿದ್ದರು.

 

ಈ ಅಣುಕು ಪ್ರದರ್ಶನವನ್ನು ನೈಜ ಘಟನೆಯಂತೆ ಬಿಂಬಿಸಲಾಗಿತ್ತು. DDMA ಯ ಸಹಾಯದಿಂದ ಪುನರ್ವಸತಿ ಕೇಂದ್ರಗಳಿಗೆ ಮುಸಾಶಿ ಆಟೋ ಪಾರ್ಟ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ನ ಕೈಗಾರಿಕಾ ಪ್ರದೇಶಕ್ಕೆ ಕಾರ್ಮಿಕರನ್ನು ಸ್ಥಳಾಂತರಿಸಲಾಯಿತು ಮತ್ತು ಪಕ್ಕದ ಕಾರ್ಖಾನೆಯಾದ Grover Jumpper Vineryard ಯಲ್ಲಿನ ನಿಯಂತ್ರಣ ಕೊಠಡಿಯಲ್ಲಿ ಡಿ-ಬೀಫಿಂಗ್ ನಡೆಸಲಾಯಿತು.

 

ಇದಲ್ಲದೆ, ಡ್ರಿಲ್ ಮಾಡುವಾಗ ತೆಗೆದುಕೊಳ್ಳಬೇಕಾದ ಜವಾಬ್ದಾರಿಗಳು, ಸಂಪನ್ಮೂಲಗಳ ಅವಶ್ಯಕತೆ, ಕಾರ್ಮಿಕರ ಮತ್ತು ಕಾರ್ಖಾನೆಗಳ ಸುರಕ್ಷತೆ, ಕಾರ್ಖಾನೆ ಸುತ್ತಮುತ್ತಲಿನ ಕಾರ್ಮಿಕರ ಮತ್ತು ಜನಗಳ ಜಾಗರೂಕತೆ ಇತ್ಯಾದಿಗಳ ವಿಷಯಗಳ ಕುರಿತಂತೆ ಸಾಮರ್ಥ್ಯ ಮತ್ತು ದೌರ್ಬಲ್ಯಗಳನ್ನು ಭಾಗಿದಾರರಿಂದ ಪಡೆಯಲಾಯಿತು.

 

ಇದು ಕೇವಲ ಅಣುಕು ಪ್ರದರ್ಶನವಾಗಿದ್ದು ಎಲ್ಲಾ ಇಲಾಖೆಗಳು ವಿಪತ್ತುಗಳು ಸಂಭವಿಸಿದಾಗ ಸರ್ವಸನ್ನದ್ಧರಾಗಿರಲು ಇಂತಹ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತದೆ.

ಈ ಅಣುಕು ಪ್ರದರ್ಶನ ನೈಜ ಘಟನೆಯಂತೆ ನಡೆಸಲಾಗಿದ್ದು ವಿಪತ್ತು ಸಂಭವಿಸಿದಾಗ ಇಲಾಖೆಗಳ ಜವಾಬ್ದಾರಿ ಯನ್ನು ಪ್ರತ್ಯಕ್ಷವಾಗಿ ತಿಳಿಸಲು ಈ ಕಾರ್ಯಾಚರಣೆ ನಡೆಸಲಾಗಿದೆ. ಈ ಅಣುಕು ಪ್ರದರ್ಶನದಲ್ಲಿ ಯಾವುದೇ ಪ್ರಾಣಪಾಯ ಸಂಭವಿಸಿರುವುದಿಲ್ಲ.

ಅಣುಕು ಪ್ರದರ್ಶನದಲ್ಲಿ ಜಿಲ್ಲಾಧಿಕಾರಿ ಎ.ಬಿ ಬಸವರಾಜು, ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ, ಕಾರ್ಖಾನೆಗಳ ಜಂಟಿ ನಿರ್ದೇಶಕರಾದ ನವನೀತ ಮೋಹನ್ ಎನ್, ಕಾರ್ಖಾನೆಗಳ ಉಪನಿರ್ದೇಶಕರಾದ ಎಂ ಎ ಸೋಮಶೇಖರ್, ನರಸಿಂಹಮೂರ್ತಿ ಎಸ್ಎ, , ವಿ ತಿಮ್ಮರಾಜು, ಮುಸಾಶಿ ಆಟೋ ಪಾರ್ಟ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವ್ಯವಸ್ಥಾಪಕರಾದ ಸುಧಾಕರ್ ಚೌಹಾಣ್, ಉಪ ಪ್ರಧಾನ ವ್ಯವಸ್ಥಾಪಕರಾದ ಬಿ ಚಂದ್ರಶೇಖರ್ ಮತ್ತು ಭಾಗೀದಾರ ಇಲಾಖೆಗಳ ಪ್ರತಿನಿಧಿಗಳು, ವೀಕ್ಷಕರು ಮತ್ತು ವಿಪತ್ತು ನಿರ್ವಹಣಾ ತಜ್ಞೆ ಸ್ಮಿತಾ ಟಿ.ಎಲ್ ಭಾಗವಹಿಸಿದ್ದರು.

Leave a Reply

Your email address will not be published. Required fields are marked *

© 2026 Malnad TV. All Rights Reserved.