
NEWDELHI :ಕನ್ನಡ ರಾಜ್ಯೋತ್ಸವ : ಕನ್ನಡ ರಾಜ್ಯೋತ್ಸವದ ಸುಸಂದರ್ಭದಲ್ಲಿ ಕನ್ನಡಿಗರಿಗೆ ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ವಿಶೇಷವಾಗಿ ಕನ್ನಡ ಭಾಷೆಯಲ್ಲಿ ಶುಭಾಶಯ ಕೋರಿದ್ದಾರೆ
ತಮ್ಮ ಸಂದೇಶದಲ್ಲಿ ಈ ಕನ್ನಡ ರಾಜ್ಯೋತ್ಸವದಂದು ನಾವು ಕರ್ನಾಟಕದ ಚೈತನ್ಯವನ್ನು ಸಂಭ್ರಮಿಸುತ್ತಿದ್ದೇವೆ .ಪ್ರಾಚೀನ ಆವಿಷ್ಕಾರ ಮತ್ತು ಆಧುನಿಕ ಉದ್ಯಮದ ತೊಟ್ಟಿಲು ಕರ್ನಾಟಕ ಪ್ರೀತಿ ಮತ್ತು ಬುದ್ದಿವಂತಿಕೆ ಎರಡರ ಮಿಳಿತವಾಗಿರುವ ಕನ್ನಡಿಗರು ಕರ್ನಾಟಕ ರಾಜ್ಯವು ಶ್ರೇಷ್ಠತೆಯ ಕಡೆಗೆ ಸತತ ಮುನ್ನಡೆಯುವಂತೆ ಉತ್ತೇಜಿಸುತ್ತಿದ್ದಾರೆ ಕರ್ನಾಟಕ ಮತ್ತಷ್ಟು ಪ್ರವರ್ಧಮಾನಕ್ಕೆ ಬರಲಿ ಇನ್ನಷ್ಟು ನಾವಿನ್ಯತೆಯೊಂದಿಗೆ ಎಲ್ಲರಿಗೂ ಸ್ಪೂರ್ತಿಯಾಗಲಿ ಎಂದು ತಿಳಿಸಿದ್ದಾರೆ
ಈ ಸಂದೇಶ ಕನ್ನಡಿಗರಿಗೆ ಮತ್ತಷ್ಟು ಸಂತಸ ತಂದು ಕೊಟ್ಟಿದೆ ಎಂದರೆ ತಪ್ಪಾಗಲಾರದು …