ದೊಡ್ಡಬಳ್ಳಾಪುರ :: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಇವರ ವತಿಯಿಂದ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮ ಶನಿವಾರ ಎಬಿಎಂ ಕಲ್ಯಾಣ ಮಂಟಪದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಜಿಲ್ಲಾ ನಿರ್ದೇಶಕ ಉಮಾರಬ್ಬ ಉದ್ಘಾಟಿಸಿ ಮಾತನಾಡಿದರು ಮಕ್ಕಳ ಶಿಕ್ಷಣದಲ್ಲಿ ಹೆತ್ತವರ ಪಾತ್ರ ಬಗ್ಗೆ ಮಾಹಿತಿ ನೀಡಿದ ಅವರು ಮಹಿಳೆಯರು ದೇಶಹಾಗೂ ಹೊರದೇಶದಲ್ಲಿ ಎಲ್ಲ ಕ್ಷೇತ್ರಗಳಲ್ಲೂ ತಮ್ಮದೇ ಆದ ಛಾಪು ಮೂಡಿಸಿದ್ದಾರೆ ಎಂದರು.

ಮಟ್ಟದ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮವನ್ನು ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ಹುಲಿಕಲ್ ನಟರಾಜ್, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಕೃಷ್ಣಮೂರ್ತಿ, ಜಿಲ್ಲಾ ಜನಜಾಗೃತಿ ಉಪಾಧ್ಯಕ್ಷ ನಾಗೇಶ್, ಸಂಘದ ತಾಲೂಕು ಯೋಜನಾಧಿಕಾರಿ ದಿನೇಶ್ ಸೇರಿದಂತೆ ಹಲವು ಗಣ್ಯರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.
ಮಹಿಳೆಯರಲ್ಲಿ ಕಂಡುಬರುವ ಬ್ರೆಸ್ಟ್ ಕ್ಯಾನ್ಸರ್ ಕುರಿತು ಜಾಗೃತಿ ಮೂಡಿಸಿದ ಅವರು ಮಾತನಾಡಿಇತ್ತಿಚಿನ ಬೆಳವಣಿಗೆಯಲ್ಲಿ ಮಹಿಳೆಯರಲ್ಲಿ ಅತಿ ಹೆಚ್ಚಾಗಿ ಬ್ರೆಸ್ಟ್ ಕ್ಯಾನ್ಸರ್ ಕಂಡುಬರುತ್ತಿದ್ದು ಕಲುಷಿತ ವಾತಾವರಣ ಆಹಾರದ ಕಲಬೆರಕೆ ಮುಂತಾದ ಕಾರಣಗಳಿಂದ ಈ ಸಮಸ್ಯೆ ಎದುರಾಗುತ್ತಿದೆ.ಆರಂಭಿಕವಾಗಿ ಚಿಕಿತ್ಸೆ ಪಡೆದರೆ ಬ್ರೆಸ್ಟ್ ಕ್ಯಾನ್ಸರ್ ನಿಂದಾಗಿ ಮುಕ್ತಿ ಪಡೆಯಬಹುದು ಅಲ್ಲದೇ ಶೀಘ್ರ ಗುಣಮುಖರಾಗಿ ಉತ್ತಮ ಜೀವನ ರೂಪಿಸಿಕೊಳ್ಳಬಹುದು ಎಂದರು.

ಕಾರ್ಯಕ್ರಮದಲ್ಲಿ ತಾಲೂಕಿನ ಮೇಲ್ವಿಚಾರಕ ಶ್ರೇಣಿ ಸಿಬ್ಬಂದಿಗಳು, ಒಕ್ಕೂಟದ ಪದಾಧಿಕಾರಿಗಳು ಸಂಘದ ಸದಸ್ಯರು ಉಪಸ್ಥಿತರಿದ್ದರು.
