ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಆಲೂರು ವೆಂಕಟರಾಯರ ಜನ್ಮದಿನಾಚರಣೆ

ಕರ್ನಾಟಕ ಏಕೀಕರಣ ಚಳುವಳಿ ಮೂಲಕ‌ ಕನ್ನಡ ನಾಡನ್ನು ಒಗ್ಗೂಡಿಸಿದವರು ಕನ್ನಡ ಕುಲ ಪುರೋಹಿತ ಆಲೂರು ವೆಂಕಟರಾಯರು ಎಂದು ಹಿರಿಯ ಸಾಹಿತಿ ಶರಣಯ್ಯ ಹಿರೇಮಠ ತಿಳಿಸಿದರು.   ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಆಲೂರು ವೆಂಕಟರಾಯರು ಜನ್ಮದಿನಾಚರಣೆ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕಾರ್ಯಕಾರಣಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಕರ್ನಾಟಕ ಇತಿಹಾಸ ಮತ್ತು ಕನ್ನಡ ಸಾಹಿತ್ಯದ  ಬಗ್ಗೆ ಅಪಾರ ಆಸಕ್ತಿ,  ಅಧ್ಯಯನಶೀಲರಾಗಿದ್ದ  ಆಲೂರು ವೆಂಕಟರಾಯರು  ಕನ್ನಡ ಸಾಹಿತಿಗಳಿಗೆ ಮತ್ತು  ಅವರ ಪುಸ್ತಕ ಪ್ರಕಟಣೆಗೆ […]

Continue Reading

ದೊಡ್ಡಬಳ್ಳಾಪುರ : ಹಿರಿಯ ಕವಿ ಡಾ.ಎಚ್.ಎಸ್. ವೆಂಕಟೇಶಮೂರ್ತಿ ಅವರಿಗೆ ನುಡಿನಮನ ಸಲ್ಲಿಸಿದ ಕನ್ನಡ ಸಾಹಿತ್ಯ ಪರಿಷತ್ತು

ಕನ್ನಡ ಸುಗಮಸಂಗೀತಕ್ಕೆ ಅತ್ಯುತ್ತಮ ಭಾವಗೀತೆಗಳನ್ನು ನೀಡಿದವರು    ಕವಿ ಡಾ.ಎಚ್.ಎಸ್.ವೆಂಕಟೇಶಮೂರ್ತಿ ಆಗಿದ್ದಾರೆ   ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಪ್ರೊ.ಕೆ.ಆರ್.ರವಿಕಿರಣ್ ತಿಳಿಸಿದರು.   ಅವರು ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಡಾ.ರಾಜ್ ಕುಮಾರ್ ಕಲಾಮಂದಿರದಲ್ಲಿ ನಡೆದ  ಹಿರಿಯ ಕವಿ ಡಾ.ಎಚ್.ಎಸ್. ವೆಂಕಟೇಶಮೂರ್ತಿ ಅವರಿಗೆ ನುಡಿನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.  ಕನ್ನಡ ಸಾಹಿತಿಗಳ ಯಾವ ಪಂಥಕ್ಕೂ ಸೇರದ ಡಾ.ಎಚ್.ಎಸ್.ವೆಂಕಟೇಶಮೂರ್ತಿ  ತಮ್ಮ ಸೃಜನಶೀಲತೆಯನ್ನು ನಿರಂತರವಾಗಿ ಉಳಿಸಿಕೊಂಡು ಬಂದವರು. ಕಾವ್ಯ, ನಾಟಕ, ವಿಮರ್ಶೆ, […]

Continue Reading

ದೊಡ್ಡಬಳ್ಳಾಪುರ : ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಪ್ರೊ.ಜಿ.ಎಸ್.ಸಿದ್ದಲಿಂಗಯ್ಯ  ನುಡಿನಮನ ಕಾರ್ಯಕ್ರಮ

ಪ್ರೊ.ಜಿ.ಎಸ್.ಸಿದ್ದಲಿಂಗಯ್ಯ ಅವರು  ಕನ್ನಡ ಸಾಹಿತ್ಯ ಪರಿಷತ್ತಿನ   ಅಧ್ಯಕ್ಷರಾಗಿದ್ದ ಅವಧಿಯಲ್ಲಿ  ಪರಿಷತ್ತು  ಸರ್ವತೋಮುಖ ಬೆಳವಣಿಗೆ ಆಯಿತು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿ ಪ್ರೊ.ರವಿಕಿರಣ್ ತಿಳಿಸಿದರು.   ಅವರು  ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ  ಡಾ.ರಾಜ್ ಕುಮಾರ್‌ ಕಲಾಮಂದಿರ ಆವರಣದಲ್ಲಿ ನಡೆದ  ಪ್ರೊ.ಜಿ.ಎಸ್.ಸಿದ್ದಲಿಂಗಯ್ಯ  ನುಡಿನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.  ಪ್ರೊ.ಜಿ.ಎಸ್.ಸಿದ್ದಲಿಂಗಯ್ಯ ಅವರು   ಕಸಾಪ  ಅಧ್ಯಕ್ಷರಾಗಿದ್ದ ಅವಧಿಯಲ್ಲಿ  ಪರಿಷತ್ತು ಧ್ವಜ ರೂಪಗೊಂಡಿತು.  ನಾಡಗೀತೆ  ಹಾಡುವ ಅವಧಿಗೆ ಬಗ್ಗೆ  ಹೆಚ್ಚು ಮಾಡಿದ್ದರು.   ಕನ್ನಡ ಸಾಹಿತ್ಯ […]

Continue Reading

ದೊಡ್ಡಬಳ್ಳಾಪುರ : ಕನ್ನಡ ನಾಡಿನ ಸಾಂಸ್ಕೃತಿಕ ಇತಿಹಾಸದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿಗೆ ಮಹತ್ವ ಸ್ಥಾನವಿದೆ – ಡಿ.ಶ್ರೀಕಾಂತ್

ಕನ್ನಡ ಸಾಹಿತ್ಯ ಪರಿಷತ್ತನ್ನು ಕಟ್ಟಿ ಬೆಳೆಸಿದ ಮಹನೀಯರ ಆಶಯ ಸಾಕಾರಗೊಂಡಾಗ ಮಾತ್ರ ಕನ್ನಡ ಭಾಷೆ,  ಸಾಹಿತ್ಯ, ಮತ್ತು ಸಂಸ್ಕೃತಿ ಸಂವರ್ಧನೆಗೊಳ್ಳುತ್ತದೆ ಎಂದು ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ್ ತಿಳಿಸಿದರು.   ಅವರು ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಡಾ.ರಾಜ್ ಕುಮಾರ್ ಕಲಾಮಂದಿರದಲ್ಲಿ  ನಡೆದ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ   ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.   ಕನ್ನಡ ನಾಡಿನ ಸಾಂಸ್ಕೃತಿಕ ಇತಿಹಾಸದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿಗೆ ಮಹತ್ವ ಸ್ಥಾನವಿದೆ. […]

Continue Reading

ಜಾತಿ ವ್ಯವಸ್ಥೆ ತೊಡೆದು ಹಾಕಿ ಸಮ ಸಮಾಜ ಕಟ್ಟುವ ಬಸವಣ್ಣನವರ ಚಿಂತನೆಗಳು ಎಲ್ಲಾ ಕಾಲಕ್ಕೂ ಮಾದರಿಯಾಗಿವೆ – ಗುರುರಾಜಪ್ಪ

ದೊಡ್ಡಬಳ್ಳಾಪುರ : ಸಾಮಾಜಿಕ ನ್ಯಾಯದ ಹರಿಕಾರರಾಗಿದ್ದ ಬಸವಣ್ಣನವರು ಅನುಭವ ಮಂಟಪದಲ್ಲಿ ಸರ್ವ ಸಮುದಾಯವರಿಗೂ ಸಮಾನ ಅವಕಾಶ ನೀಡಿದರು ಎಂದು ಕನ್ನಡಪರ ಹಿರಿಯ ಹೋರಾಟಗಾರ ಗುರುರಾಜಪ್ಪ ತಿಳಿಸಿದರು.   ಅವರು ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಡಾ.ರಾಜ್ ಕುಮಾರ್ ಕಲಾಮಂದಿರದಲ್ಲಿ  ನಡೆದ  ಬಸವ ಜಯಂತಿ   ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಸಾಮಾಜಿಕ ವ್ಯವಸ್ಥೆಯಲ್ಲಿನ ತಾರತಮ್ಯವನ್ನು ನಿವಾರಿಸುವ ಕಡೆಗೆ ಬಸವಣ್ಣನವರು ಮೊದಲ ಆದ್ಯತೆಯನ್ನು ನೀಡಿದರು. ಜಾತಿ ವ್ಯವಸ್ಥೆ ತೊಡೆದು ಹಾಕಿ ಸಮ ಸಮಾಜ ಕಟ್ಟುವ ಬಸವಣ್ಣನವರ ಚಿಂತನೆಗಳು ಎಲ್ಲಾ […]

Continue Reading

ಏಪ್ರಿಲ್ 12ಮತ್ತು 13ಕ್ಕೆ 26ನೇ ಕನ್ನಡ ಸಾಹಿತ್ಯ ಸಮ್ಮೇಳನ : ಕನಸವಾಡಿಯಲ್ಲಿ ನೆಡೆಯಲಿದೆ ಎರಡು ದಿನಗಳ ಅಕ್ಷರ ಜಾತ್ರೆ – ಬಿ.ಎನ್.ಕೃಷ್ಣಪ್ಪ

ದೊಡ್ಡಬಳ್ಳಾಪುರ: ತಾಲೂಕಿನ ಮಧುರೆ ಹೋಬಳಿ ಕನಸವಾಡಿಯಲ್ಲಿ ಏ.12 ಮತ್ತು 13ರಂದು ಶನಿವಾರ ಮತ್ತು ಭಾನುವಾರ ಬೆಂಗಳೂರು ಗ್ರಾಮಾಂತರ ಜಿಲ್ಲಾ 26ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ ಎಂದು ಬೆಂ.ಗ್ರಾ ಜಿಲ್ಲಾ ಕಸಾಪ ಅಧ್ಯಕ್ಷ ಬಿ.ಎನ್.ಕೃಷ್ಣಪ್ಪ ತಿಳಿಸಿದರು.   ನಗರದ ಪ್ರವಾಸಿ ಮಂದಿರದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು 26ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಈಗಾಗಲೇ ಸಕಲ ಸಿದ್ಧತೆ ಪೂರ್ಣಗೊಂಡಿದ್ದು, ಕನಸವಾಡಿಯ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ವೇದಿಕೆ ಸಜ್ಜಗುತ್ತಿದ್ದು . ಈ ಬಾರಿ ಸಮ್ಮೇಳನದ […]

Continue Reading

ಸಂವಿಧಾನದ ಆಶಯಗಳನ್ನು   ಸಾಕಾರಗೊಳಿಸುವುದು  ನಮ್ಮೆಲ್ಲರ ಕರ್ತವ್ಯವಾಗಿದೆ – ಕೆ.ವಿ.ವೆಂಕಟೇಶರೆಡ್ಡಿ

ದೊಡ್ಡಬಳ್ಳಾಪುರ : ಭಾರತದಲ್ಲಿ ಸಂವಿಧಾನವೇ ಸರ್ವೋಚ್ಚವಾದುದು. ಸಂವಿಧಾನ ಜಾರಿಗೆ ಬಂದ ಕಾರಣದಿಂದಲೇ ನಮ್ಮ ದೇಶದ ಸಮಗ್ರ ಅಭಿವೃದ್ಧಿ ಸಾಧ್ಯವಾಯಿತು ಎಂದು ನಿವೃತ್ತ ಮುಖ್ಯಶಿಕ್ಷಕ ಕೆ.ವಿ.ವೆಂಕಟೇಶರೆಡ್ಡಿ ತಿಳಿಸಿದರು.   ಅವರು ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನಡೆದ  ಗಣರಾಜ್ಯೋತ್ಸವ  ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.   ನಮ್ಮ ದೇಶದ  ಪ್ರತಿಯೊಬ್ಬರೂ  ಸಂವಿಧಾನವನ್ನು ಗೌರವಿಸಬೇಕು.  ಸಂವಿಧಾನದ ಆಶಯಗಳನ್ನು   ಸಾಕಾರಗೊಳಿಸುವುದು  ನಮ್ಮೆಲ್ಲರ ಕರ್ತವ್ಯವಾಗಿದೆ. ಸಂವಿಧಾನ ಜಾರಿಗೆ ಬಂದ ದಿನವಾದ  ಗಣರಾಜ್ಯೋತ್ಸವ  ದಿನಾಚರಣೆ  ಪ್ರತಿಯೊಬ್ಬ ಭಾರತೀಯ ಪ್ರಜೆಗೂ ಮಹತ್ವದ […]

Continue Reading

ದೊಡ್ಡಬಳ್ಳಾಪುರ  ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಮಾಜಿ ಶಾಸಕ‌ ಜೆ.ನರಸಿಂಹಸ್ವಾಮಿ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಮಾಜಿ ಶಾಸಕ ಜೆ.ನರಸಿಂಹಸ್ವಾಮಿ ಅವರಿಗೆ ನುಡಿನಮನ ಕಾರ್ಯಕ್ರಮ ಡಾ.ರಾಜ್ ಕಲಾಮಂದಿರದಲ್ಲಿ ನಡೆಯಿತು.   ನುಡಿನಮನ ಕಾರ್ಯಕ್ರಮದಲ್ಲಿ ಮಾತನಾಡಿದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಪ್ರೊ.ಕೆ.ಆರ್.ರವಿಕಿರಣ್, ದೊಡ್ಡಬಳ್ಳಾಪುರ ತಾಲ್ಲೂಕಿನ ಅಭಿವೃದ್ದಿ ಕಾರ್ಯಗಳೊಂದಿಗೆ ಕನ್ನಡಪರವಾದ ಸಾಂಸ್ಕೃತಿಕ ಕಾರ್ಯಕ್ರಮಗಳಿಗೂ ಸಹಕಾರ ಮತ್ತು ಪ್ರೋತ್ಸಾಹವನ್ನು ನೀಡುತ್ತಿದ್ದ ಮಾಜಿ ಶಾಸಕ ಜೆ.ನರಸಿಂಹಸ್ವಾಮಿ ಅವರು ಕನ್ನಡ ಸಾಹಿತಿಗಳು ಮತ್ತು ಕಲಾವಿದರೊಂದಿಗೆ ನಿಕಟಸಂಪರ್ಕ ಹೊಂದಿದ್ದರು. ಜ್ಞಾನಪೀಠ ಪುರಸ್ಕೃತರಾದ ಡಾ.ಚಂದ್ರಶೇಖರ ಕಂಬಾರದೊಂದಿಗೆ ಆತ್ಮೀಯ ‌ಒಡನಾಟವಿತ್ತು. […]

Continue Reading

*ಕಸಾಪ ಸಾಹಿತ್ಯ ಪರೀಕ್ಷೆಗಳಿಗೆ ಅರ್ಜಿ ಆಹ್ವಾನ*

ದೊಡ್ಡಬಳ್ಳಾಪುರ: ಕನ್ನಡ ಸಾಹಿತ್ಯ ಪರಿಷತ್ತು ಪ್ರತಿವರ್ಷ ನಡೆಸುವ ಕನ್ನಡ ಪ್ರವೇಶ, ಕನ್ನಡ ಕಾವ, ಕನ್ನಡ ಜಾಣ ಮತ್ತು ಕನ್ನಡ ರತ್ನ ಪರೀಕ್ಷೆಗಳಿಗೆ ಅರ್ಜಿ ಆಹ್ವಾನಿಸಿದೆ. ಬರುವ ಡಿಸೆಂಬರ್‌ನಲ್ಲಿ ಪರೀಕ್ಷೆಗಳು ನಡೆಯಲಿದೆ.   ಪರೀಕ್ಷೆಗಳಿಗೆ ಸಂಬಂಧಿಸಿದ ಪಠ್ಯ, ವಿವರ ಹಾಗೂ ಮಾಹಿತಿಯನ್ನು ಬೆಂಗಳೂರಿನ ಚಾಮರಾಜಪೇಟೆಯ ಪಂಪ ಮಹಾಕವಿ ರಸ್ತೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಪರೀಕ್ಷಾ ವಿಭಾಗದಲ್ಲಿ ಪಡೆಯಬಹುದು.   2024-25ನೇ ಸಾಲಿನ ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸಲು ಆಗಸ್ಟ್‌ 31 ಕೊನೆಯ ದಿನವಾಗಿದ್ದು, 50 ರುಪಾಯಿ ದಂಡ ಶುಲ್ಕದೊಂದಿಗೆ ಸೆಪ್ಟೆಂಬರ್ […]

Continue Reading

*ದೊಡ್ಡಬಳ್ಳಾಪುರ ಕನ್ನಡ ಸಾಹಿತ್ಯ ಪರಿಷತ್ತಿನ ನೇತೃತ್ವದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತ್ಯುತ್ಸವ*

*ದೊಡ್ಡಬಳ್ಳಾಪುರ* : ನಾಡಪ್ರಭು ಕೆಂಪೇಗೌಡ ಕರ್ನಾಟಕದ ಅಗ್ರಗಣ್ಯ ಆಡಳಿತಗಾರರ ಸಾಲಿನಲ್ಲಿ ಕಾಣಿಸಿಕೊಳ್ಳುತ್ತಾರೆ. ಬೆಂಗಳೂರು ನಗರದ ನಿರ್ಮಾತೃವಾಗಿರುವ ಕೆಂಪೇಗೌಡರು ದೂರಗಾಮಿ ಚಿಂತನೆಗಳನ್ನು ಹೊಂದಿದ್ದ ನಾಯಕ ಎಂದು ಬೆಂ.ಗ್ರಾ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ಎನ್.ಕೃಷ್ಣಪ್ಪ ಹೇಳಿದರು.   ಇಲ್ಲಿನ ಅಭಿನೇತ್ರಿ ಸಾಂಸ್ಕೃತಿಕ ಸಂಘದ ಸಭಾಂಗಣದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ದೊಡ್ಡಬಳ್ಳಾಪುರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಅಭಿನೇತ್ರಿ ಸಾಂಸ್ಕೃತಿಕ ಸಂಘ ಹಾಗೂ ಭಜನೆಹಟ್ಟಿ ಲಕ್ಷ್ಮಯ್ಯ ಚಾರಿಟಬಲ್ ಟ್ರಸ್ಟ್‌ಗಳ ಸಹಯೋಗದಲ್ಲಿ ಬುಧವಾರ ಸಂಜೆ ಆಯೋಜಿಸಲಾಗಿದ್ದ […]

Continue Reading