*ನಾಡೋಜ ಕಮಲಾ ಹಂಪನಾ ನುಡಿನಮನ ಕಾರ್ಯಕ್ರಮ*

ಕನ್ನಡ ಸಾಹಿತ್ಯ ಮತ್ತು ಸಂಶೋಧನೆಗೆ  ನಾಡೋಜ ಕಮಲಾ ಹಂಪನಾ ಕೊಡುಗೆ ಅನನ್ಯವಾಗಿದೆ.  ಸ್ತ್ರೀ ಸಂವೇದನೆಗೆ ಸಂಬಂಧಿಸಿದ ಸಂಶೋಧನೆ, ಜೈನ ಸಾಹಿತ್ಯ ಅವರ ವಿಶೇಷ ಅಧ್ಯಯನ ಕ್ಷೇತ್ರವಾಗಿತ್ತು ಎಂದು ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು ತಿಳಿಸಿದರು.   ದೊಡ್ಡಬಳ್ಳಾಪುರ ಕನ್ನಡ ಜಾಗೃತ ಭವನದಲ್ಲಿ  ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ಸಹಯೋಗದಲ್ಲಿ ನಡೆದ ನಾಡೋಜ ಕಮಲಾ ಹಂಪನಾ ನುಡಿನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಹಳೆಗನ್ನಡ ಸಾಹಿತ್ಯದ ಸಮಗ್ರ ಅಧ್ಯಯನದಿಂದಾಗಿ  ಮಹತ್ವದ  […]

Continue Reading

*ಮೈಸೂರು ರಾಜ್ಯ “ಮಾದರಿ ಮೈಸೂರು” ಆಗಲು ನಾಲ್ವಡಿ ಕೃಷ್ಣರಾಜ ಒಡೆಯರ ದೂರದೃಷ್ಟಿಯೇ ಕಾರಣ – ಜಿ. ಸುರೇಶ್*

ದೊಡ್ಡಬಳ್ಳಾಪುರ ಜೂನ್ 04 ( ವಿಜಯಮಿತ್ರ ) : ಮೈಸೂರು ರಾಜ್ಯವನ್ನು   ಸಮಗ್ರವಾಗಿ ಅಭಿವೃದ್ಧಿಗೊಳಿಸಿದ ನಾಲ್ವಡಿ ಕೃಷ್ಣರಾಜ ಒಡೆಯರ್  ಕನ್ನಡ ನಾಡಿನ ಅಭಿವೃದ್ಧಿಯ ಹರಿಕಾರರಾಗಿದ್ದಾರೆ  ಎಂದು ನವೋದಯ ವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ವಿ.ಎಸ್.ಹೆಗಡೆ  ತಿಳಿಸಿದರು.     ಅವರು ನಗರದ ಎಂ.ಎ.ಬಿ.ಎಲ್ ಪ್ರೌಢಶಾಲೆಯಲ್ಲಿ  ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನಡೆದ  ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.  ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಆಡಳಿತ ಸಮಯದಲ್ಲಿ ನಿರ್ಮಾಣವಾದ ವಿವಿಧ ಜಲಾಶಯಗಳು, ಬೃಹತ್ […]

Continue Reading

*ದೊಡ್ಡಬಳ್ಳಾಪುರ : ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ*

ದೊಡ್ಡಬಳ್ಳಾಪುರ ಮೇ 05 ( ವಿಜಯಮಿತ್ರ ) : ಕನ್ನಡ ಭಾಷೆ ಮತ್ತು  ಸಾಹಿತ್ಯದ  ಅನನ್ಯತೆಯನ್ನು  ಉಳಿಸುವ, ಬೆಳೆಸುವ  ಮಹಾದಾಸೆಯಿಂದ ಸ್ವಾತಂತ್ರ್ಯ ಪೂರ್ವದಲ್ಲೆ  ಕನ್ನಡ ಸಾಹಿತ್ಯ ಪರಿಷತ್ತು ಸ್ಥಾಪನೆಯಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಪ್ರೊ.ಕೆ.ಆರ್.ರವಿಕಿರಣ್ ತಿಳಿಸಿದರು.   ‌‌ಅವರು  ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ  ಡಾ.ರಾಜ್ ಕುಮಾರ್ ಕಲಾಮಂದಿರದಲ್ಲಿ  ನಡೆದ *ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ* ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.  ಕನ್ನಡ ಭಾಷಿಕರು  ಆಡಳಿತಾತ್ಮಕವಾಗಿ […]

Continue Reading

*’ಕನ್ನಡ ಅಭಿಮಾನದ ದಿನ’ವಾಗಿ ಡಾ.ರಾಜ್ ಕುಮಾರ್ ಜನ್ಮದಿನದ ಆಚರಣೆ*

ದೊಡ್ಡಬಳ್ಳಾಪುರ ಏಪ್ರಿಲ್ 25 (ವಿಜಯ ಮಿತ್ರ ) : ಕನ್ನಡ ರಂಗಭೂಮಿಯಿಂದ ಚಲನಚಿತ್ರ ರಂಗಕ್ಕೆ ಬಂದ ಬಹುಮುಖಿ ಪ್ರತಿಭೆಯ ಮೇರು ಕಲಾವಿದ ಡಾ.ರಾಜ್ ಕುಮಾರ್ ಕನ್ನಡ ಚಲನಚಿತ್ರ ನಟರಾಗಿ ಹಲವು ಪ್ರಶಸ್ತಿ ಪುರಸ್ಕಾರಗಳಿಗೆ ಭಾಜನರಾಗಿದ್ದ ಡಾ.ರಾಜ್ ಕುಮಾರ್ ಗಾಯಕರಾಗಿ ರಾಷ್ಟ್ರಪ್ರಶಸ್ತಿಯನ್ನು ಪಡೆದಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ತು ಕಸಬಾ ಹೋಬಳಿ ಘಟಕ ಕೋಶಾಧ್ಯಕ್ಷ ಜಿ.ಸುರೇಶ್ ತಿಳಿಸಿದರು.     ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ  ಪರಿಷತ್ತು ವತಿಯಿಂದ ಡಾ.ರಾಜ್ ಕುಮಾರ್ ಕಲಾ ಮಂದಿರದಲ್ಲಿ ನಡೆದ ಡಾ.ರಾಜ್ ಕುಮಾರ್ […]

Continue Reading

*ಕನ್ನಡ ಸಾಹಿತ್ಯಕ್ಕೆ ಮತ್ತು ಸಾಹಿತಿಗಳಿಗೆ ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಚಾರಧಾರೆಗಳ ಪ್ರಭಾವ ಅಪಾರವಾಗಿದೆ – ಪಿ.ಗೋವಿಂದರಾಜು*

ದೊಡ್ಡಬಳ್ಳಾಪುರ ( ವಿಜಯಮಿತ್ರ ) : ಮಹಾನಾಯಕ ನಮ್ಮ ದೇಶದ ಮಾರ್ಗದರ್ಶಕ ನಮ್ಮ ಭಾರತ ದೇಶ ಕಂಡ ಶ್ರೇಷ್ಠ ನಾಯಕರಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಪ್ರಮುಖರು. ಡಾ.ಬಿ.ಆರ್. ಅಂಬೇಡ್ಕರ್ ಅವರ ಬದುಕು ಬರಹಗಳೇ ಭಾರತೀಯರಿಗೆ ಮಾರ್ಗದರ್ಶನವಾಗಿವೆ ಎಂದು ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು ತಿಳಿಸಿದರು.     ಅವರು ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಡಾ.ರಾಜಕುಮಾರ್ ಕಲಾಮಂದಿರ ಆವರಣದಲ್ಲಿ‌ ನಡೆದ ಡಾ.ಬಿ.ಆರ್.ಅಂಬೇಡ್ಕರ್ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಕನ್ನಡ ಸಾಹಿತ್ಯಕ್ಕೆ […]

Continue Reading

*ದ್ವಾರಕೀಶ್‌ ಅವರ ಸಾಧನೆಗೆ  ವಿಶ್ವವಿದ್ಯಾಲಯದಿಂದ  ಗೌರವ ಡಾಕ್ಟರೇಟ್  ದೊರೆಯಬೇಕಿದೆ –   ವಿ.ಎಸ್.ಹೆಗಡೆ*

ದೊಡ್ಡಬಳ್ಳಾಪುರ ಏಪ್ರಿಲ್ 17 ( ವಿಜಯಮಿತ್ರ ) : ಕನ್ನಡ ಚಲನಚಿತ್ರ ರಂಗದಲ್ಲಿ ನಟ, ನಿರ್ದೇಶಕ, ನಿರ್ಮಾಪಕ, ವಿತರಕ  ಹೀಗೆ  ಬಹುಮುಖ ಪ್ರತಿಭೆಯೊಂದಿಗೆ ಚಿತ್ರ  ರಂಗದಲ್ಲಿ ಸಕ್ರಿಯರಾಗಿದ್ದ ದ್ವಾರಕೀಶ್‌   ಅವರ ಸಾಧನೆಗೆ  ವಿಶ್ವವಿದ್ಯಾಲಯದಿಂದ  ಗೌರವ ಡಾಕ್ಟರೇಟ್  ದೊರೆಯಬೇಕಾಗಿದೆ ಎಂದು ಜವಾಹರ್ ನವೋದಯ ವಿದ್ಯಾಲಯದ  ನಿವೃತ್ತ ಅಧ್ಯಾಪಕ   ವಿ.ಎಸ್.ಹೆಗಡೆ ತಿಳಿಸಿದರು.   ಅವರು ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ  ಪರಿಷತ್ತು ಮತ್ತು  ಕನ್ನಡ ಜಾಗೃತ  ಪರಿಷತ್ತು   ಸಹಯೋಗದಲ್ಲಿ  ಕನ್ನಡ ಜಾಗೃತ ಭವನದಲ್ಲಿ  ನಡೆದ  ಕನ್ನಡದ ಹಿರಿಯ  ನಟ, ನಿರ್ದೇಶಕ […]

Continue Reading

ದೊಡ್ಡಬಳ್ಳಾಪುರ ತಾಲ್ಲೂಕು ಕಸಾಪ ವತಿಯಿಂದ ಗಣರಾಜ್ಯೋತ್ಸವ ಆಚರಣೆ

ದೊಡ್ಡಬಳ್ಳಾಪುರ : ನಮ್ಮ  ಸಂವಿಧಾನವು  ದೇಶದ ಸಮಗ್ರ ಅಭಿವೃದ್ಧಿಯಲ್ಲಿ  ಮಹತ್ವದ ಪಾತ್ರ ವಹಿಸಿದೆ.  ಸಂವಿಧಾನದ ಆಶಯಗಳನ್ನು   ಸಾಕಾರಗೊಳಿಸುವುದು  ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು  ಜೆಸಿಐಯುಟಿ ಜಿಲ್ಲಾ ಉಪಾಧ್ಯಕ್ಷ ಪಿ.ಎ.ವೆಂಕಟೇಶ್ ತಿಳಿಸಿದರು. ಅವರು ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನಡೆದ  ಗಣರಾಜ್ಯೋತ್ಸವ  ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.  ನಮ್ಮ ಸಂವಿಧಾನವು    ಭಾರತವನ್ನು ಸಾರ್ವಭೌಮ, ಸಮಾಜವಾದಿ, ಜಾತ್ಯತೀತ ಮತ್ತು ಪ್ರಜಾಸತ್ತಾತ್ಮಕ ಗಣರಾಜ್ಯವನ್ನಾಗಿ ಮಾಡಿದೆ.    ಸಂವಿಧಾನ ಜಾರಿಗೆ ಬಂದ ಕಾರಣದಿಂದಲೇ ನಮ್ಮ ದೇಶದ ಪ್ರತಿಯೊಬ್ಬ ಪ್ರಜೆಗೂ   ಮೂಲಭೂತ […]

Continue Reading

ದೊಡ್ಡಬಳ್ಳಾಪುರ ತಾಲ್ಲೂಕು 13ನೇ ಕನ್ನಡ ಸಾಹಿತ್ಯ ಸಮ್ಮೇಳನ ಫೆಬ್ರವರಿ 25ಹಾಗೂ 26ಕ್ಕೆ ಮುಂದೂಡಿಕೆ

ಶಿಕ್ಷಕರ ಕ್ಷೇತ್ರದ ಚುನಾವಣೆ ಘೋಷಣೆ: ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಮುಂದೂಡಿಕೆ ದೊಡ್ಡಬಳ್ಳಾಪುರ: ಜನವರಿ ತಿಂಗಳ 21/22 ರಂದು ನಡೆಯಬೇಕಿದ್ದ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮುಂದೂಡಲಾಗಿದೆ.   ಶಿಕ್ಷಕರ ಕ್ಷೇತ್ರದ ಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು 13ನೇ ಕನ್ನಡ ಸಾಹಿತ್ಯ ಸಮ್ಮೇಳನವು ದಿನಾಂಕ : 25.02024 ಭಾನುವಾರ ಮತ್ತು 26.02.2024 ರಂದು ಸೋಮವಾರ ನಡೆಯಲಿದೆ.   ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ಜನವರಿ 21 ಮತ್ತು 22 ರಂದು ನಡೆಯಬೇಕಾಗಿದ್ದ ಕನ್ನಡ ಸಾಹಿತ್ಯ ಸಮ್ಮೇಳನವನ್ನು ವಿಧಾನಪರಿಷತ್ತು […]

Continue Reading

13ನೇ ಕನ್ನಡ ಸಾಹಿತ್ಯ ಸಮ್ಮೇಳನ : ಕಸಾಪ ನೂತನ ಲೋಗೋ ಲೋಕಾರ್ಪಣೆ ಮಾಡಿದ ಶಾಸಕ ಧೀರಜ್ ಮುನಿರಾಜು

ದೊಡ್ಡಬಳ್ಳಾಪುರ : 2024 ರ ಜನವರಿ 21 ಹಾಗೂ 22 ರಂದು ತಾಲ್ಲೂಕಿನ ಭಾಶೇಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಸರ್ಕಾರಿ ಪ್ರೌಡಶಾಲೆಯಲ್ಲಿ 13 ನೇ ಕನ್ನಡ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ತಾಲ್ಲೂಕಿನ ಶಾಸಕರಾದ ಧೀರಜ್ ಮುನಿರಾಜು ಘೋಷಿಸಿದರು ಈ ಸಮ್ಮೇಳನದ ಅಧ್ಯಕ್ಷತೆಯನ್ನು ಡಾ . ಅಂಜಿನಪ್ಪ ವಹಿಸಿದ್ದಾರೆ ಎಂದು ತಿಳಿಸಿದರು   ಈ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಲಾಂಛನವನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ಸಮ್ಮುಖದಲ್ಲಿ ತಾಲ್ಲೂಕಿನ ಶಾಸಕರಾದ ಧೀರಜ್ ಮುನಿರಾಜು […]

Continue Reading