*ಮೌನವಾಗಿ ಕೆಲಸ ಮಾಡಿ, ಫಲಿತಂಶದಿಂದಲೇ ಸದ್ದು ಮಾಡುವ ಗುಣ ನಿಜಕ್ಕೂ ಶ್ಲಾಘನೀಯ – ಹಮಾಮ್ ವೆಂಕಟೇಶ್*

ಬಾಶೆಟ್ಟಿಹಳ್ಳಿ ಪ್ರೌಢಶಾಲೆಯಲ್ಲಿ ಕರವೇ ಪ್ರವೀಣ್ ಶೆಟ್ಟಿ ಬಣದ ಕಾರ್ಯಕರ್ತರಿಂದ ಸೋಮವಾರ ಬಾಶೆಟ್ಟಿಹಳ್ಳಿಯ ಸರ್ಕಾರಿ ಪ್ರೌಢಶಾಲೆ ಮುಖ್ಯಶಿಕ್ಷಕ ನಾರಾಯಣಸ್ವಾಮಿ ಸೇವೆಗೆ ರಾಷ್ಟ್ರ ಪ್ರಶಸ್ತಿ ಲಭಿಸಿರುವ ಹಿನ್ನಲೆ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಗಿತ್ತು.     ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷ ರಮೇಶ್‌ ಮಾತನಾಡಿ ಸಮಾಜಕ್ಕೆ ಉತ್ತಮ ಶಿಕ್ಷಕರ ಅಗತ್ಯವಿದ್ದು, ಬಾಶೆಟ್ಟಿಹಳ್ಳಿಯ ಸರ್ಕಾರಿ ಪ್ರೌಢಶಾಲೆ ಮುಖ್ಯಶಿಕ್ಷಕ ನಾರಾಯಣಸ್ವಾಮಿ ಸೇವೆಗೆ ರಾಷ್ಟ್ರ ಪ್ರಶಸ್ತಿ ಲಭಿಸಿರುವುದು ದೊಡ್ಡಬಳ್ಳಾಪುರದ ಹೆಮ್ಮೆಯ ವಿಚಾರವಾಗಿದೆ ಎಂದು ಅಭಿಪ್ರಾಯಪಟ್ಟರು.   ಬಾಶೆಟ್ಟಿಹಳ್ಳಿಯ ಕೈಗಾರಿಕಾ ಪ್ರದೇಶದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚು ಸ್ಥಾನಮಾನ ಸಿಗುವ ನಿಟ್ಟಿನಲ್ಲಿ […]

Continue Reading

*ಸ್ಥಳೀಯ ಅಂಗನವಾಡಿಗಳ ಸಮಸ್ಯೆ ಕುರಿತಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸುದ್ದಿಗೋಷ್ಠಿ*

ಬೆಂಗಳೂರು (ವಿಜಯಮಿತ್ರ) : ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಆದೇಶದ ಮೇರೆಗೆ ದಿನಾಂಕಃ 14.08.2024 ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ, ಜಿಲ್ಲೆಯ ಕೆಲವು ಅಂಗನವಾಡಿ ಕೇಂದ್ರಗಳಿಗೆ ಆಕಸ್ಮಿಕ ಬೇಟಿ ನೀಡಿ ಪರಿಶೀಲನೆ ನೆಡೆಸಿ ವರದಿ ಸಲ್ಲಿಸಿರುವ ಕುರಿತು ಬೆಂಗಳೂರು ಗ್ರಾಮಾಂತರ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷರಾದ ಕೆ. ಬಿ. ಗೀತಾ ತಿಳಿಸಿದರು.   ಒಟ್ಟು ಅಂಗನವಾಡಿಗಳು ಎಸ್ಟಿವೆ…?? ಆನೇಕಲ್ ತಾಲ್ಲೂಕಿನಲ್ಲಿ ಒಟ್ಟು […]

Continue Reading

*ರಾಜ್ಯ ಸರ್ಕಾರದ ನಿರ್ಧಾರ ಕನ್ನಡಿಗರ ಹೆಮ್ಮೆಯನ್ನು ದುಪ್ಪಟ್ಟು ಮಾಡಿದೆ – ಕರವೇ ಜಿಲ್ಲಾಧ್ಯಕ್ಷ ಪುರುಷೋತ್ತಮ್ ಗೌಡ*

ದೊಡ್ಡಬಳ್ಳಾಪುರ (ವಿಜಯಮಿತ್ರ) : ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ’ ಅಭಿಯಾನದಡಿ ಎಲ್ಲಾ ಸರ್ಕಾರಿ ನೌಕರರು ಕೆಂಪು-ಹಳದಿ ಬಣ್ಣದ ಗುರುತಿನ ಚೀಟಿಯ ಕೊರಳುದಾರವನ್ನು (ಟ್ಯಾಗ್) ಹಾಕಿಕೊಳ್ಳುವಂತೆ ಆದೇಶ ಹೊರಡಿಸಿರುವ ರಾಜ್ಯ ಸರ್ಕಾರಕ್ಕೆ ಕರ್ನಾಟಕ ರಕ್ಷಣಾ ವೇದಿಕೆಯ ಬೆಂಗಳೂರು ಗ್ರಾಮಾಂತರ ಘಟಕ ಜಿಲ್ಲಾಧ್ಯಕ್ಷ ಪುರುಷೋತ್ತಮ್ ಗೌಡ ಅಭಿನಂದನೆ ಸಲ್ಲಿಸಿದ್ದಾರೆ   ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳು, ನಿಗಮ, ಮಂಡಳಿ, ನಿರ್ದೇಶನಾಲಯ, ಆಯುಕ್ತಾಲಯ ಇತ್ಯಾದಿ ಸರ್ಕಾರಿ ಮತ್ತು ಸರ್ಕಾರಿ ಸ್ವಾಮ್ಯದ ಕಛೇರಿಗಳಲ್ಲಿ ಕರ್ತವ್ಯ ನಿರ್ವಹಿಸುವ ಎಲ್ಲಾ ಸರ್ಕಾರಿ ನೌಕರರು ಕೆಂಪು-ಹಳದಿ ಬಣ್ಣಗಳನ್ನು […]

Continue Reading

*ಹೊಸಕೋಟೆಯಲ್ಲಿ ಅನಿರೀಕ್ಷಿತ ದಾಳಿ: ಒಬ್ಬ ಕಿಶೋರ ಕಾರ್ಮಿಕರ ರಕ್ಷಣೆ*

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆಗಸ್ಟ್. 12, (ವಿಜಯಮಿತ್ರ):- ಜಿಲ್ಲಾ ಬಾಲಕಾರ್ಮಿಕ ಯೋಜನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಕ್ಕಳ ಸಹಾಯವಾಣಿ-1098 ಹಾಗೂ ಶಿಕ್ಷಣ ಇಲಾಖೆ ಇವರ ಜಂಟಿಯಾಗಿ ಹೊಸಕೋಟೆ ಟೌನ್ ಹಾಗೂ ದೊಡ್ಡದುನ್ನಸಂದ್ರದಲ್ಲಿ ವಿವಿಧ ಸ್ಥಳಗಳಲ್ಲಿ ಸೋಮವಾರದಂದು ಬಾಲ ಕಾರ್ಮಿಕರ ಹಾಗೂ ಕಿಶೋರ ಕಾರ್ಮಿಕರ ಅನಿರೀಕ್ಷಿತ ತಪಾಸಣೆ ಹಾಗೂ ದಾಳಿಯನ್ನು ನಡೆಸಿದರು.   ಈ ತಪಾಸಣೆ ವೇಳೆಯಲ್ಲಿ ಒಬ್ಬ ಕಿಶೋರ ಕಾರ್ಮಿಕರನ್ನು ರಕ್ಷಿಸಲಾಗಿದ್ದು, ಬಳಿಕ ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಮುಂದಿನ ಕ್ರಮಕ್ಕಾಗಿ ಹಾಜರು ಪಡಿಸಿದರು. […]

Continue Reading

*ಕೊನಘಟ್ಟ ಪಂಚಾಯಿತಿ ಕಟ್ಟಡವನ್ನೇ ಖಾಸಗಿ ವ್ಯಕ್ತಿಗೆ ಖಾತೆ ಮಾಡಿರುವ ಆರೋಪ : ಗ್ರಾಮ ಪಂಚಾಯಿತಿ ಉಳಿಸಲು ಗ್ರಾಮಸ್ಥರ ಹೋರಾಟ*

ದೊಡ್ಡಬಳ್ಳಾಪುರ : ತಾಲೂಕಿನ ಕೊನಘಟ್ಟ ಗ್ರಾಮ ಪಂಚಾಯಿತಿ ಕಟ್ಟಡವನ್ನು ಖಾಸಗಿ ವ್ಯಕ್ತಿಗೆ ಖಾತೆ ಮಾಡಿಕೊಡಲಾಗಿದೆ ಎಂದು ಆರೋಪಿಸಿ ಸ್ಥಳೀಯ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಕೊನಘಟ್ಟ ಗ್ರಾಮ ಪಂಚಾಯಿತಿ ಕಟ್ಟಡವಿರುವ ಜಾಗ ಖಾಸಗಿ ವ್ಯಕ್ತಿಯ ಹೆಸರಿಗೆ ಖಾತೆ ಮಾಡುವ ಮೂಲಕ ಪಂಚಾಯಿತಿ ಕಟ್ಟಡವು ಖಾಸಗಿ ವ್ಯಕ್ತಿಯ ಪಾಲಾಗಿದೆ, ಪಂಚಾಯಿತಿ ಕಟ್ಟಡದ ಜಾಗವನ್ನು ಉಳಿಸಿಕೊಳ್ಳಲು ಗ್ರಾಮಸ್ಥರು ಹೋರಾಟಕ್ಕೆ ಮುಂದಾಗಿದ್ದಾರೆ.   ತಾಲ್ಲೂಕಿನ ಕೊನಘಟ್ಟ ಗ್ರಾಮದ ಸರ್ವೆ ನಂಬರ್ 351/2 ಹಾಗೂ 351/3ರ ಒಟ್ಟು 4 ಗುಂಟೆ ಜಾಗದಲ್ಲಿ ಗ್ರಾಮ ಪಂಚಾಯಿತಿ […]

Continue Reading

*ಪರಿಸರ ಸಮತೋಲನಕ್ಕಾಗಿ ಗಿಡ-ಮರ ಬೆಳೆಸಿ: ಸಚಿವ ಕೆ.ಎಚ್. ಮುನಿಯಪ್ಪ*

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆಗಸ್ಟ್ 03,2024 (ವಿಜಯಮಿತ್ರ):- ಪ್ರಕೃತಿ ವಿಕೋಪಗಳನ್ನು ತಪ್ಪಿಸಲು ಪ್ರಕೃತಿಯ ಸಮತೋಲನ ಕಾಪಾಡಲು ಗಿಡ-ಮರಗಳನ್ನು ಬೆಳೆಸಲು ನಾವೆಲ್ಲರು ಅಣಿಯಾದಾಗ ಮಾತ್ರ ಸರಿಯಾದ ಸಮಯಕ್ಕೆ ಮಳೆ, ಬೆಳೆ, ಪರಿಸರ ಸಮತೋಲನ ಕಾಪಾಡಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಚ್ ಮುನಿಯಪ್ಪ ಅವರು ಹೇಳಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕುಂದಾಣ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆ ಆವರಣದಲ್ಲಿ […]

Continue Reading

*ಉದ್ಯಮಿ ಸಮಾಜಸೇವಕ ಸಂದೀಪ್ ರವರಿಗೆ ಹುಟ್ಟುಹಬ್ಬದ ಸಂಭ್ರಮ : ವಿಜೃಂಭಣೆಯ ಕಾರ್ಯಕ್ರಮ ಆಯೋಜನೆ ಮಾಡಲಿರುವ ಅಭಿಮಾನಿ ವರ್ಗ *

ದೊಡ್ಡಬಳ್ಳಾಪುರ:ಯುವ ಮುಖಂಡ ಉದ್ಯಮಿ ಹಾಗೂ ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಜನ್ಮ ದಿನಾಚರಣೆ ಜುಲೈ 31 ಬುಧವಾರದಂದು ಅವರ ಸ್ವಗ್ರಾಮದಲ್ಲಿ ಆಯೋಜನೆ ಮಾಡಲಾಗಿದೆ ಎಂದು ಅಭಿಮಾನಿ ಬಳಗ ತಿಳಿಸಿದೆ. ನಿರಂತರ ಸಮಾಜಸೇವೆ ಹಾಗೂ ಕನ್ನಡಪರ ಧ್ವನಿಯಾಗಿ ಶ್ರಮಿಸುವ ಸಂದೀಪ್ ರವರ ಹುಟ್ಟು ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲು ಯೋಜನೆ ರೂಪಿಸಲಾಗಿದ್ದು ಕಾರ್ಯಕ್ರಮದಲ್ಲಿ ಹಲವಾರು ಗಣ್ಯರು,ಹಿತೈಷಿಗಳು ಸೇರಿದಂತೆ ಅಭಿಮಾನಿ ವರ್ಗ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ. ಕಾರ್ಯಕ್ರಮವನ್ನು ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಪ್ರಾರಂಭಿಸಿ ಹಾಗೂ ಸರ್ಕಾರಿ ಶಾಲಾ […]

Continue Reading

*ಯುವನಿಧಿ ಯೋಜನೆ: ಅರ್ಜಿಗಳ ದಾಖಲಾತಿ ಪರಿಶೀಲಿಸಿಕೊಳ್ಳಿ*

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜುಲೈ 10: ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಯುವನಿಧಿ’ ಯೋಜನೆ ಅಡಿಯಲ್ಲಿ ನಿರುದ್ಯೋಗ ಭತ್ಯೆ ಪಡೆಯಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ. ನಂತರ ದಾಖಲಾತಿಗಳ ಪರಿಶೀಲನೆಗಾಗಿ ಬಾಕಿ ಇರುವ ಅಭ್ಯರ್ಥಿಗಳು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಛೇರಿ ಅಥವಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಛೇರಿಗಳಿಗೆ ಸಂಬಂಧಪಟ್ಟ ದಾಖಲಾತಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿಕೊಳ್ಳಲು ಈ ಮೂಲಕ ತಿಳಿಸಲಾಗಿದೆ. ಅರ್ಜಿದಾರರ […]

Continue Reading

*ಹವಾಮಾನ ಆಧಾರಿತ ಬೆಳೆ ವಿಮೆಗೆ ನೊಂದಾಯಿಸಿ*

ಬೆಂಗಳೂರು ಗ್ರಾಮಾಂತರ ಜಿಲ್ಲೆ,ವಿಜಯಮಿತ್ರ :- 2024-25ನೇ ಸಾಲಿನ ಮುಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ (RWBCIS)ಯಡಿ ವಿವಿಧ ತೋಟಗಾರಿಕೆ ಬೆಳೆಗಳಿಗೆ ವಿಮೆ ಮಾಡಿಸ ಬಹುದಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಧೀನ ತಾಲ್ಲೂಕುಗಳಾದ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಮತ್ತು ನೆಲಮಂಗಲ ತಾಲ್ಲೂಕುಗಳನ್ನು ವಿಮೆಯ ವ್ಯಾಪ್ತಿಗೆ ಒಳಪಡಿಸಲಾಗಿದೆ.   ಹವಾಮಾನ ಅಂಶಗಳಾದ ತಾಪಮಾನ, ಗಾಳಿಯ ವೇಗ, ಮಳೆಯ ಪ್ರಮಾಣ, ಆರ್ದ್ರತೆ ಇತ್ಯಾದಿ ಮಾಹಿತಿಗಳನ್ನು ಸರ್ಕಾರದಿಂದ ಅಧಿಸೂಚಿತ ಟೆಲಿ ಮೆಟ್ರಿಕ್ ಮಳೆ ಮಾಪನ ಕೇಂದ್ರ ಮತ್ತು […]

Continue Reading

*ಜೂನ್ 29 ರಂದು ಜಿಲ್ಲಾಡಳಿತ ಭವನದಲ್ಲಿ ನಾಡಪ್ರಭು ಶ್ರೀ ಕೆಂಪೇಗೌಡರ 515ನೇ ಜಯಂತ್ಯೋತ್ಸವ*

ಬೆಂಗಳೂರು ಗ್ರಾಮಾಂತರ ಜಿಲ್ಲೆ ಜೂನ್ 28 (ವಿಜಯಮಿತ್ರ ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ವತಿಯಿಂದ ನಾಡಪ್ರಭು ಶ್ರೀ ಕೆಂಪೇಗೌಡರ 515ನೇ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಜೂನ್ 29(ಶನಿವಾರ) ರಂದು ಬೆಳಗ್ಗೆ 10.30 ಗಂಟೆಗೆ ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿದೆ.   ಕಾರ್ಯಕ್ರಮದ ಅಧ್ಯಕ್ಷತೆ ಹಾಗೂ ಉದ್ಘಾಟನೆಯನ್ನು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ […]

Continue Reading